Breaking News

ಕೊರೊನಾಗೆ ಮೊದಲ ಬಲಿಯಾದ ಕಲಬುರಗಿಯಲ್ಲಿ ಇನ್ನೂ ಪ್ರಾರಂಭಿಸಿಲ್ಲ ಲ್ಯಾಬ್: ಪ್ರಿಯಾಂಕ್ ಖರ್ಗೆ ಆಕ್ರೋಶ

Spread the love

ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ ಕೂಡ ಕಲಬುರಗಿ ಜಿಲ್ಲೆಯ ಐದು ಸಾವಿರ ಸ್ಯಾಂಪಲ್ಸ್ ವರದಿ ಬಾಕಿಯಿದೆ. ಕಲಬುರಗಿ ಜಿಲ್ಲೆಗೆ ಅತಿ ಹೆಚ್ಚು ವಲಸೆ ಕಾರ್ಮಿಕರು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಕೊರೊನಾ ಸೋಂಕಿತರು ಇರೋದು ಕಲಬುರಗಿ ಜಿಲ್ಲೆಯಲ್ಲಿ. ಆದರೂ ಕೂಡ ಸರ್ಕಾರ ಮತ್ತೊಂದು ಕೊರೊನಾ ಟೆಸ್ಟ್ ಲ್ಯಾಬ್ ಪ್ರಾರಂಭಿಸಿಲ್ಲ. ಕೊರೊನಾ ಲ್ಯಾಬ್ ರಿಪೋರ್ಟ್ ಗಾಗಿ ನಾಲ್ಕೈದು ದಿನ ಕಾಯಬೇಕಾದ ಸ್ಥಿತಿ ಎದುರಾಗಿದೆ.

ಅನೇಕ ಸ್ಯಾಂಪಲ್ಸ್ ಗಳನ್ನು ಇನ್ನು ಕೂಡ ಬೆಂಗಳೂರು ಲ್ಯಾಬ್ ಗೆ ಜಿಲ್ಲಾಡಳಿತ ಕಳಿಸ್ತಿದೆ. ನದರದ ಇಎಸ್‍ಐ ಆಸ್ಪತ್ರೆಯಲ್ಲಿ ಈ ಹಿಂದೆ ಲ್ಯಾಬ್ ಪ್ರಾರಂಭ ಮಾಡೋದಾಗಿ ಹೇಳಿತ್ತು. ಕಲಬುರಗಿ ನಗರದಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಆದರೆ ಲ್ಯಾಬ್ ಪ್ರಾರಂಭಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಯಡಿಯೂರಪ್ಪ ಲಿಂಗಾಯತನೇ ಅಲ್ಲ,ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಯತ್ನಾಳ್

Spread the loveಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ