Breaking News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ವಾದ ಮಂಡಿಸಲು ನುರಿತ ವಕೀಲರ ನಿಯೋಜನೆ: ಸಿಎಂ

Spread the love

ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಲ್ಲಿ ನ. 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೋಕೇಟ್ ಜನರಲ್ ರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ವಿಷಯ ಕುರಿತು ಈಗಾಗಲೇ ಅಡ್ವೋಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ. ಆ ಕುರಿತು ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡಿಸಲು ನುರಿತ, ಅತ್ಯಂತ ಹಿರಿಯ ವಕೀಲರನ್ನು ನಿಯೋಜಿಸಬೇಕು ಎಂದು ನಿರ್ದೇಶಿಸಲಾಗಿದೆ. ಸರಕಾರ ಈ ಕುರಿತು ನಿರ್ಲಕ್ಷ್ಯವಹಿಸಿಲ್ಲ. ಸಮರ್ಥವಾಗಿ ವಾದ ಮಂಡಿಸಲಿದೆ ಎಂದರು.

 


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ