Breaking News

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್‌ಐ ನೇಮಕಾತಿ’ಗೆ ಅರ್ಜಿ

Spread the love

ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ( PSI Recruitment Scam ) ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ( PSI Recruitment 2022 ) ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ.

 

ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು .ಈಗ ವಾರ್ಷಿಕ‌ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ ಎಂದರು.

 

ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು.ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು‌.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ