Breaking News

ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

Spread the love

ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ.

ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು.

ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ.

ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ ಹೋಗಿದ್ದಾನೆ. ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡಾ ಸ್ಥಳಕ್ಕೆ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ: ಸರ್ಕಾರಿ ಕಟ್ಟಡಗಳು ಹಾವು, ಚೇಳುಗಳಿಗೆ ಮೀಸಲು

Spread the love ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಹಲವು ಸರ್ಕಾರಿ ಕಟ್ಟಡಗಳು ಖಾಲಿ ಬಿದ್ದಿವೆ. ಮಾತ್ರವಲ್ಲ; ಹಲವು ಕಟ್ಟಡಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ