Breaking News

ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಇಬ್ಬರಿಗೆ ನೋಟಿಸ್

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್‍ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ.

 

ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಖ್ಯಾತಿಯ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ಮಾಡಿದ್ದೇವೆ. ಯೋಗಿ, ಅಯ್ಯಪ್ಪ ಅಲ್ಲದೇ ಸೀರಿಯಲ್‌ ನಟಿ ರಶ್ಮಿ ಚಂಗಪ್ಪ, ಖಾಸಗಿ ವಾಹಿನಿ ಸಿಬ್ಬಂದಿ ನಿಶ್ಚಿತ ಶರತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಮಹತ್ವದ ಮಾಹಿತಿಗಳನ್ನು ಕಲೆಹಾಕಲಾಗಿದೆ. ತನಿಖಾ ಹಂತದಲ್ಲಿ ಕೆಲ ಮಾಹಿತಿಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಸದ್ಯ ಬೇರೆ ಯಾರಿಗೂ ನೋಟಿಸ್ ನೀಡಿಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದು ತಿಳಿಸಿದ್ದಾರೆ.

ಬಂಧಿತರ ಬಳಿ ಗಾಂಜಾ, ಎಲ್‍ಎಸ್‍ಡಿ ಮಾತ್ರೆಗಳು ಸಿಕ್ಕಿದ್ದವು. ಹೀಗಾಗಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವುದಾಗಿ ಆರೋಪಿಗಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ನೋಟಿಸ್ ನೀಡಿ ವಿಚಾರಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ