Breaking News

ಮುರುಘಾ ಶ್ರೀಗಳಿಗೆ ಕಠಿಣ ಶಿಕ್ಷೆ ವಿಧಿಸಿ: ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ

Spread the love

ಶ್ರೀಮಠದಲ್ಲಿ ಓದುತ್ತಿದ್ದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕ ಆಗ್ರಹಿಸಿದೆ.

ಸೋಮವಾರ ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯ ಯುವ ಘಟಕದ ಪದಾಧಿಕಾರಿಗಳು ಮುರುಘಾ ಶ್ರೀಗಳು ತಮ್ಮ ಮಠದಲ್ಲಿ ಒದುತ್ತಿದ್ದ ಹೆಣ್ಣು ಮಕ್ಕಳಿಗೆ ದೈಹಿಕ ಕಿರುಕುಳ ನೀಡಿ ಅವರ ಮೇಲೆ ಅತ್ಯಾಚಾರ ಎಸಗಿ ಜೀವಬೆದರಿಕೆ ಹಾಕಿದ್ದರು.

ಈಗ ಮುರುಘಾಶ್ರೀಗಳ ಕೃತ್ಯಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಹೀಗಾಗಿ ಮುರುಘಾ ಶ್ರೀಗಳಿಗೆ ಫೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ