Breaking News

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್‌ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ‌ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ ‌ತಾಲೂಕಿನ ಅರಭಾವಿ ಗ್ರಾಮದ ಶಿವಾನಂದ ದುಂಡಪ್ಪ ಹಳ್ಳೂರ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ