Breaking News
Home / ರಾಜಕೀಯ / ಸಬ್ ರಿಜಿಸ್ಟರ್ ಕಚೇರಿ ಮೂಲಸೌಕರ್ಯ ಕೊರತೆ ನೀಗಿಸಿ, ಇಲ್ಲವಾದರೆ ಕ್ರಮ: ಸಚಿವ ಅಶೋಕ್

ಸಬ್ ರಿಜಿಸ್ಟರ್ ಕಚೇರಿ ಮೂಲಸೌಕರ್ಯ ಕೊರತೆ ನೀಗಿಸಿ, ಇಲ್ಲವಾದರೆ ಕ್ರಮ: ಸಚಿವ ಅಶೋಕ್

Spread the love

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

ಏನೆಲ್ಲಾ ಕೊರತೆಗಳು ಪತ್ತೆ?: ಶೌಚಾಲಯ ಕೊರತೆಗಳಿರುವ ರಿಜಿಸ್ಟರ್ ಕಚೇರಿಗಳ ಸಂಖ್ಯೆ 36 ಪತ್ತೆಯಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕೊರತೆ ಇರುವ ಕಚೇರಿಗಳ ಸಂಖ್ಯೆ 28 ಇದೆ. ಲಿಫ್ಟ್ ಕೊರತೆ ಇರುವ ಕಚೇರಿಗಳ ಸಂಖ್ಯೆ 202 ಇವೆ. ಇನ್ನು 135 ಕಚೇರಿಗಳಲ್ಲಿ ರ‍್ಯಾಂಪ್​ಗಳ ಕೊರತೆ ಇವೆ.

2 ಕಚೇರಿಗಳಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನದ ಕೊರತೆ ಇರುವುದು ಕಂಡು ಬಂದಿದೆ. 58 ಕಚೇರಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಉಪ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಈ ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕಛೇರಿಗಳಲ್ಲಿ ಕೂಡಲೇ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರ ಸೂಚಿಸಿದ್ದಾರೆ.

ಈ ಮೂಲಭೂತ ಸೌಕರ್ಯ ಒದಗಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾ ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿಗಳ ಮೇಲೆ ಶಿಸ್ತು ಕ್ರಮ ವಹಿಸಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ