Breaking News

 ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್​ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಿಸಿದರು.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ‌ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

 

ಆರ್ಥಿಕತೆ ಬಲದ ಆಧಾರದ ಮೇಲೆ ಅಭಿವೃದ್ಧಿ, ‌ಜನರ‌ ಆಶೋತ್ತರಗಳಿಗೆ ಸ್ಪಂದನೆ ಜತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಶಕ್ತವಾಗಲಿ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಸಹಭಾಗಿತ್ವ ಮುಖ್ಯ: ಪ್ರಧಾನಿ ನರೇಂದ್ರ ಮೋದಿ ಅವರು 2025ರ ವೇಳೆಗೆ ಭಾರತ ಐದು ಟ್ರಿಲಿಯನ್ ಆರ್ಥಿಕತೆ ಸಾಧಿಸುವ ಗುರಿ ಇಟ್ಟುಕೊಂಡಿದೆ,‌ ಇದರಲ್ಲಿ ಒಂದು ಟ್ರಿಲಿಯನ್ ಕರ್ನಾಟಕದ ಪಾಲು ಇರಬೇಕು ಎನ್ನುವ ರಾಜ್ಯ ಸರ್ಕಾರದ ಸಂಕಲ್ಪಕ್ಕೆ ಸರ್ಕಾರಿ ನೌಕರರ ಸಹಭಾಗಿತ್ವ ಕೂಡ ಮುಖ್ಯ ಎಂದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ