Breaking News

ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು:C.M. ಬೊಮ್ಮಾಯಿ

Spread the love

ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, ಅವುಗಳೆಲ್ಲವೂ ತುಂಬಿ, ನಿರಂತರವಾಗಿ ಮಳೆಯಾಗಿ ನೀರು ಹರಿಯುತ್ತಿದೆ.

ಅನಿರೀಕ್ಷಿತ ಮಳೆಯಾಗಿದ್ದು, ಯಾವ ಚರಂಡಿಯನ್ನೂ ಈ ರೀತಿಯ ಮಳೆಗೆ ವಿನ್ಯಾಸಗೊಳಿಸಿರಲಿಲ್ಲ. ಮಹದೇವಪುರದಲ್ಲಿ ಒತ್ತುವರಿಯಾಗಿದೆ ಎಂದರು


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ