ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್ ಕತ್ತಿ ಅಂತ್ಯಸಂಸ್ಕಾರ
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಮೃತದೇಹದ ಅಂತಿಮ ಸಂಸ್ಕಾರ ಇಂದು ಸಂಜೆ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಬೆಳಗಾವಿಯ ಶಿವಬಸವ ನಗರದಲ್ಲಿರುವ ಸಚಿವರ ಸ್ವಗೃಹ ಮತ್ತು ಬೆಳಗ್ಗೆ 10.30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಮೃತದೇಹವನ್ನು ರವಾನಿಸಲಿದ್ದು, ಸಂಜೆ ಕತ್ತಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Laxmi News 24×7