Breaking News

ಉಮೇಶ್ ಕತ್ತಿ ನಿಧನದಿಂದ ತೀವ್ರ ಆಘಾತವಾಗಿದೆ :H.D.K.

Spread the love

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

 

ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ.

ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ