Breaking News

ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕ: 11 ಶಿಕ್ಷಕರ ಬಂಧನ

Spread the love

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

 

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ ಶಾಲೆಯ ರಾಜೇಶ್ವರಿ ಜಗ್ಲಿ (35), ತಿಪಟೂರು ತಾಲೂಕಿನ ಆಲ್ಬೂರ್‌ ಗ್ರಾಮದ ಶಾಲೆಯ ಕಮಲಾ(35), ಕುಣಿಗಲ್‌ ತಾಲೂಕಿನ ನಾಗಸಂದ್ರ ಗ್ರಾಮದ ಶಾಲೆಯ ನಾಗರತ್ನ(42), ತುರುವೇಕೆರೆ ತಾಲೂಕಿನ ಹುಲಿಕಲ್‌ ಗ್ರಾಮ ಶಾಲೆಯ ಎಚ್‌.ದಿನೇಶ್‌(38), ಚಿಕ್ಕನಾಯಕನಹಳ್ಳಿ ತಾಲೂಕಿನ ಕಮ್ಲಾಪುರ ಗ್ರಾಮದ ಶಾಲೆಯ ನವೀನ್‌ ಹನುಮೇಗೌಡ(35), ಕುಣಿಗಲ್‌ ತಾಲೂಕಿನ ಅಮೃತೂರು ಗ್ರಾಮದ ಶಾಲೆಯ ನವೀನ್‌ ಕುಮಾರ್‌(38), ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ ಶಾಲೆಯ ಎಸ್‌. ದೇವೇಂದ್ರ ನಾಯಕ್‌, ಕುಣಿಗಲ್‌ ತಾಲೂಕಿನ ಹೊಳಗೇರಿ ಗ್ರಾಮ ಶಾಲೆಯ ಆರ್‌.ಹರೀಶ್‌(37), ತುರುವೇಕೆರೆ ತಾಲೂಕಿನ ಬಿ.ಎಂ.ಪ್ರಸನ್ನ(42) ಮತ್ತು ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಮಹೇಶ್‌ ಶ್ರೀಮಂತ ಸೂಸಲಾಡಿ(38) ಎಂಬುವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿಗಾಗಿ ಶೋಧ ನಡೆಯುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ