Breaking News

2022 ಇಂದು ನೀಟ್ ಪರೀಕ್ಷೆ ಫಲಿತಾಂಶ,

Spread the love

ಬೆಂಗಳೂರು: ಬುಧವಾರ(ಸೆ.7) ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ(NEET UG 2022) ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಇಂದು ಹೊರ ಬೀಳಲಿದೆ.

NTA ಅಧಿಕೃತ ವೆಬ್‌ಸೈಟ್‌ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇಲ್ಲಿ ಲಾಗಿನ್ ಆಗಿ ತಮ್ಮ ರಿಸಲ್ಟ್ ಪರಿಶೀಲಿಸಬಹುದು. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು.

 

NEET UG 2022 ಫಲಿತಾಂಶ ನೋಡುವುದು ಹೇಗೆ?

  • ನೀವು ಮೊದಲಿಗೆನೀಟ್‍ನ ಅಧಿಕೃತ ವೆಬ್‌ಸೈಟ್‌ neet.nta.nic.in ಅಥವಾ ntaresults.nic.in ಗೆ ಭೇಟಿ ನೀಡಬೇಕು
  • ನಂತರ ಮುಖಪುಟದಲ್ಲಿ ‘NEET UG – 2022 Result 2022’ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು
  • ಬಳಿಕ ನಿಮ್ಮ ಲಾಗಿನ್‌ ಐಡಿ, ಜನ್ಮ ದಿನಾಂಕ, ನೋಂದಣಿ ಸಂಖ್ಯೆ ನಮೂದಿಸಬೇಕು.
  • ಈಗ ನಿಮಗೆ ‘NEET UG Result’ ಪರದೆಯ ಮೇಲೆ ಕಾಣಿಸುತ್ತದೆ.
  • ಬಳಿಕ ಅದರ ಮೇಲೆ ಕ್ಲಿಕ್ ಮಾಡಿ ರಿಸಲ್ಟ್ ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟ್‍ಔಟ್ ತೆಗೆದುಕೊಳ್ಳಿರಿ

ನೀಟ್ ಮರು ಪರೀಕ್ಷೆ

ತಾಂತ್ರಿಕ ದೋಷಗಳಿಂದ ಜುಲೈ 17ರಂದು ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 4ರಂದು ನೀಟ್ ಮರು ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ 18,72,343 ಅಭ್ಯರ್ಥಿಗಳು NEET UG ಪರೀಕ್ಷೆಗೆ ಹಾಜರಾಗಿದ್ದರು.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ