Breaking News

ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ

Spread the love

ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು.

‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು.

‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ’ ಎಂದರು.

ನಂತರ ಅವರು ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿರುವ ಬೆಲ್ಲದ ಬಾಗೇವಾಡಿಗೆ ತೆರಳಿದರು.


Spread the love

About Laxminews 24x7

Check Also

ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ

Spread the loveಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ