Breaking News

ಮಣ್ಣಲ್ಲಿ ಮಣ್ಣಾದ ಉಮೇಶ್ ಕತ್ತಿ

Spread the love

ಬೆಲ್ಲದ ಬಾಗೇವಾಡಿ (ಬೆಳಗಾವಿ): ಆಹಾರ ಮತ್ತು ಅರಣ್ಯ ಸಚಿವ ಉಮೇಶ ವಿಶ್ವನಾಥ ಕತ್ತಿ (61) ಅವರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಅಂತಿಮ ಯಾತ್ರೆ ನಡೆಸಿ ವೀರಶೈವ ಲಿಂಗಾ ಯತ ಸಮುದಾಯದ ವಿಧಿ ವಿಧಾನದಂತೆ ಬುಧವಾರ ರಾತ್ರಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

 

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ  ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು ಹಾಗೂ ಅರ್ಚಕರು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಪುತ್ರ ನಿಖೀಲ್‌ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದರು.

ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ,ಯಡಿಯೂರಪ್ಪ, ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಿತ ಪಕ್ಷದ ಹಾಗೂ ವಿಪಕ್ಷಗಳ ಹಲವು ನಾಯಕರು ಭಾಗಿಯಾಗಿದ್ದರು.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ