ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ( Actress Leelavathi ) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.
ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.