Breaking News

BJP ಮುಖಂಡನ ಹನಿಟ್ರ್ಯಾಪ್ ಪ್ರಕರಣ: ಬಿಗ್ ಟ್ವಿಸ್ಟ್.. ಬೆಡ್ ರೂಮ್ Video ವೈರಲ್

Spread the love

ಮಂಡ್ಯ :- ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು.

ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್​ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು.

ನಂತರ ಚಿನ್ನದ ಪರೀಕ್ಷೆಗೆಂದು ಕರೆದುಕೊಂಡು ಹೋಗಿ ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್​ ರೂಮ್​ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್​ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಂಡ್ಯದ ಸಲ್ಮಾಭಾನು ಮತ್ತು ತಂಡವನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದರು.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ