Breaking News

ಡೈಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿ; ಬೇಸತ್ತ ಪೋಷಕರು ಮಾಡಿದ್ದೇನು ಗೊತ್ತಾ?

Spread the love

ತುಮಕೂರು: ಶಿಕ್ಷಕರನ್ನು ಗುರುಗಳೆಂದು ಪೂಜಿಸುತ್ತಾರೆ. ಮಕ್ಕಳಿಗೆ ಪಾಠ ಕಲಿಸಿ ಬುದ್ದಿಹೇಳುವ ಶಿಕ್ಷಕರು ಕಂಡ್ರೆ ಮಕ್ಕಳಿಗೂ ಇಷ್ಟವಾಗುತ್ತದೆ. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಕಂಠಪೂರ್ತಿ ಕುಡಿದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

 

ಹೌದು ತುಮಕೂರು ಜಿಲ್ಲೆಯ ಚಿಕ್ಕ ಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರ ಬಳಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.
ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

ಳೆದ 5 ವರ್ಷದಿಂದ ಕುಡಿಯುವ ಚಟಕ್ಕೆ ಒಳಗಾಗಿದ್ದರು.ಹೀಗಾಗಿ ಬೆಳ್ಳಂಬೆಳಗ್ಗೆ ಶಿಕ್ಷಕಿ ಕುಡಿದುಕೊಂಡು ಬಂದು ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು, ಬೇರೆವರ ಜೊತೆ ಜಗಳವಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿತ್ತು.

ಇದನ್ನು ಮನಗಂಡ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಾಕೀತು ಮಾಡಿದ್ದರು. ಆದರೆ ಗಂಗ ಲಕ್ಷ್ಮಮ್ಮ ತನ್ನ ಚಾಳಿ ಬದಲಿಸಲಿಲ್ಲ. ಇದರಿಂದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ