Breaking News

ಬೆಳಗಾವಿ: ಉಮೇಶ ಕತ್ತಿ ನಿವಾಸಕ್ಕೆ ಗಣ್ಯರ ದಂಡು, ಕುಟುಂಬಸ್ಥರಿಗೆ ಸಾಂತ್ವನ

Spread the love

ಬೆಲ್ಲದ ಬಾಗೇವಾಡಿ (ಬೆಳಗಾವಿ ಜಿಲ್ಲೆ): ಉಮೇಶ ಕತ್ತಿ ಅವರ ಇಲ್ಲಿನ ನಿವಾಸಕ್ಕೆ ಗುರುವಾರ ಕೂಡ ಹಲವು ಗಣ್ಯರು, ಸಚಿವರು, ಶಾಸಕರು, ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿದರು. ತೋಟದ ಆವರಣದಲ್ಲಿನ ಉಮೇಶ ಕತ್ತಿ ಅವರ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

 

ಉಮೇಶ ಕತ್ತಿಯವರ ಪತ್ನಿ ಶೀಲಾ, ಪುತ್ರ ನಿಖಿಲ್, ಪುತ್ರಿ ಸ್ನೇಹಾ, ಸಹೋದರ ರಮೇಶ, ಅವರ ಪುತ್ರರಾದ ಪವನ್, ಪೃಥ್ವಿ ಸೇರಿ ಕುಟುಂಬದವರನ್ನು ಭೇಟಿ ಮಾಡಿದ ಗಣ್ಯರು ಸಾಂತ್ವನ ಹೇಳಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಬೆಲ್ಲದ ಬಾಗೇವಾಡಿಗೆ ತೆರಳಿದರು.

‘ಉಮೇಶ ಕತ್ತಿ ಬಿಂದಾಸ್ ವ್ಯಕ್ತಿತ್ವದವರು. ಅವರ ಅಗಲಿಕೆಯಿಂದ ಬಿಜೆಪಿ ಮತ್ತು ರಾಜ್ಯಕ್ಕೆ ಅಪಾರವಾದ ಹಾನಿಯಾಗಿದೆ’ ಎಂದು ಮಾಧ್ಯಮದವರಿಗೆ ತಿಳಿಸಿದರು.

ಸಚಿವ ಎಂಟಿಬಿ ನಾಗರಾಜ್, ‘ಊಮೇಶ ಅವರು ತಾರುಣ್ಯದಲ್ಲೇ ಪಳಗಿದ್ದರು. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಬಹಳಷ್ಟು ಕನಸು ಕಂಡಿದ್ದರು. ನೇರ ನುಡಿಗಾಗಿಯೇ ಅವರು ಆಪ್ತರಾಗುತ್ತಿದ್ದರು’ ಎಂದರು.

‘ಇದು ಇಡೀ ಉತ್ತರ ಕರ್ನಾಟಕಕ್ಕೆ ಅತ್ಯಂತ ನೋವಿನ ಸಂಗತಿ. ನಮಗೆ ಈಗಲೂ ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ಸಚಿವ ಮುನಿರತ್ನ ತೀವ್ರ ದುಃಖಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ‘ಹಿಡಕಲ್ ಜಲಾಶಯದಲ್ಲಿ ಕೂಡ ಕೆ.ಆರ್.ಎಸ್. ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಉಮೇಶ ಕತ್ತಿ ಅವರ ಆಸೆಯನ್ನು ಸಿ.ಎಂ. ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಈಡೇರಿಸಲಾಗುವುದು’ ಎಂದರು.

ಶ್ರೀಶೈಲ ಪೀಠದ ಚನ್ನಬಸವ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೊಲ್ಹಾಪುರ ಕಣೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಗದಗ ಡಂಬಳ ಶಿವಾನಂದ ಸ್ವಾಮೀಜಿ ಸೇರಿದಂತೆ ಹಲವರು ಕತ್ತಿ ಕುಟುಂಬದವರಿಗೆ ಧೈರ್ಯ ಹೇಳಿದರು.

ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಸವದಿ, ಲಕ್ಷ್ಮೀ ಹೆಬ್ಬಾಳಕರ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರು ಭೇಟಿ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ