Breaking News

ಪರೀಕ್ಷೆ ಅಕ್ರಮ| ಎಲೆಕ್ಟ್ರಾನಿಕ್ ಉಪಕರಣ ಮಾರುತ್ತಿದ್ದ ಬೆಂಗಳೂರಿನ ಆರೋಪಿ ಬಂಧನ

Spread the love

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಈಚೆಗೆ ನಡೆದ ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ, ಎಲೆಕ್ಟ್ರಾನಿಕ್‌ ಡಿವೈಸ್‌ ಹಾಗೂ ಸ್ಮಾರ್ಟ್‌ ವಾಚ್‌ ಪೂರೈಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯ ಮೂಲಕ ರಾಜ್ಯದ ವಿವಿಧ ಪರೀಕ್ಷೆಗಳಲ್ಲೂ ಅಕ್ರಮ ಎಸಗಲು ಅವಕಾಶ ಮಾಡಿಕೊಟ್ಟ ಪ್ರಕರಣಗಳಿಗೂ ಸಾಕ್ಷ್ಯ ಸಿಕ್ಕಂತಾಗಿದೆ.

ಬೆಂಗಳೂರಿನ ದೇವಸಂದ್ರದ ನಿವಾಸಿ, ಎಸ್ಪಿ ರಸ್ತೆಯಲ್ಲಿ ‘ಸ್ಪೈ ಜೋನ್‌’ ಎಂಬ ಎಲೆಕ್ಟ್ರಾನಿಕ್‌ ಮಳಿಗೆ ಇಟ್ಟುಕೊಂಡ ಮಹಮ್ಮದ್‌ ಅಜೀಮುದ್ದೀನ್‌ (37) ಬಂಧಿತ ಆರೋಪಿ. ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ಅಕ್ರಮ ಎಸಗಲು ಪೂರೈಸಿದ ಹಲವು ಎಲೆಕ್ಟ್ರಾನಿಕ್‌ ಉಪಕರಣಗಳನ್ನೂ ಈತನಿಂದ ವಶಕ್ಕೆ ಪಡೆಯಲಾಗಿದ್ದು, ಮಳಿಗೆ ಸೀಜ್‌ ಮಾಡಲಾಗಿದೆ.

ಈಚೆಗೆ ನಡೆದ ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪಿಗಳನ್ನು ಜಾಲಾಡಲು ಹೋದ ಪೊಲೀಸರಿಗೆ ಈ ಜಾಲದ ಮುಖ್ಯ ಆರೋಪಿಯೇ ಸಿಕ್ಕಿಬಿದ್ದಿದ್ದಾನೆ. ಈತ ಎಲೆಕ್ಟ್ರಾನಿಕ್‌ ಸೂಕ್ಷ್ಮ ಉಪಕರಣಗಳನ್ನು ದೆಹಲಿ, ಹೈದರಾಬಾದ್‌ನ ಡೀಲರ್‌ಗಳಿಂದ ಅಕ್ರಮವಾಗಿ ಖರೀದಿ ಮಾಡಿಕೊಂಡು ಬರುತ್ತಿದ್ದ.

ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಬ್ಲೂಟೂತ್‌, ಸ್ಮಾರ್ಟ್‌ ವಾಚ್‌ ನೀಡಿದ್ದ ಸಂಜೀವ ಭಂಡಾರಿ ಈತನಿಂದಲೇ ಉಪಕರಣಗಳನ್ನು ಖರೀದಿಸಿ ಅಭ್ಯರ್ಥಿಗಳಿಗೆ ಮಾರಿದ್ದ. ಅವುಗಳನ್ನು ಖರೀದಿಸಿದ ಸಂಜೀವ ಭಂಡಾರಿಯನ್ನು ಪೊಲೀಸರು ಈಚೆಗೆ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧರಿಸಿ ಮೂಲಕ್ಕೇ ಕೈ ಹಾಕಿದ ಪೊಲೀಸರು, ಇಡೀ ಎಲೆಕ್ಟ್ರಾನಿಕ್‌ ಮಳಿಗೆಯನ್ನೇ ಜಾಲಾಡಿದರು.

ಬಂಧಿತನಿಂದ ಎರಡು ಮೊಬೈಲ್, ವಿವಿಧ ಬಗೆಯ ಎಲೆಕ್ಟ್ರಾನಿಕ್ ಉಪಕರಣ ಸೇರಿ ಒಟ್ಟು 179 ವಸ್ತುಗಳು, ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಎನ್-95 ಮಾಸ್ಕ್, ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ 41 ಬನಿಯನ್, ವಿವಿಧ ಬಗೆಯ 445 ಎಲೆಕ್ಟ್ರಾನಿಕ್ ಇಯರ್ ಪೀಸ್ (ಕಿವಿಯಲ್ಲಿ ಇಡುವುದು), ವಿವಿಧ ಬಗೆಯ 554 ಚಾರ್ಜಿಂಗ್ ಕೇಬಲ್, 6 ವಾಕಿಟಾಕಿ ಮುಂತಾದ ವೈರ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ.

ಈ ತನಿಖಾ ತಂಡ ನೇತೃತ್ವ ವಹಿಸಿದ ತನಿಖಾಧಿಕಾರಿ ಡಿವೈಎಸ್‌ಪಿ ವಿರೇಶ ದೊಡಮನಿ, ಪಿಎಸ್‌ಐ ನಾಗನಗೌಡ ಕಟ್ಟಿಮನಿಗೌಡ್ರ, ಎಎಸ್‌ಐ ಎ.ಎಚ್‌.ಭಜಂತ್ರಿ, ಎಸ್‌.ಆರ್‌.ಮಾಳಗಿ, ಎನ್‌.ಆರ್.ಘಡೆಪ್ಪನವರ, ಜಿ.ಎಸ್‌.ಲಮಾಣಿ (ಎಲ್ಲರೂ ಸಿಇಎನ್‌ ಠಾಣೆ) ಆರೋಪಿಯನ್ನು ಮಾಲು ಸಮೇತ ಬಂಧಿಸಿದರು.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ