Breaking News

B.J.P. ಸರ್ಕಾರದ ‘ಜನಸ್ಪಂದನ’ ಇಂದು; ಸರ್ಕಾರದ ‘ರಿಪೋರ್ಟ್ ಕಾರ್ಡ್’ ಮಂಡಿಸುವ C.M.

Spread the love

ಬೆಂಗಳೂರು /ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ‘ಜನಸ್ಪಂದನ’ ಸಮಾವೇಶಕ್ಕೆ ದೊಡ್ಡಬಳ್ಳಾಪುರದಲ್ಲಿ ವೇದಿಕೆ ಸಜ್ಜಾಗಿದೆ. 2023 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಆಶಯದಿಂದ ನಡೆಸುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

 

‘ಜನೋತ್ಸವ’ದ ಹೆಸರಿನಲ್ಲಿ ನಡೆಯಬೇಕಿದ್ದ ಈ ಕಾರ್ಯಕ್ರಮ ಮೂರು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ‘ಜನಸ್ಪಂದನ’ದ ಹೆಸರಿನಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಧುಗಿರಿಯಿಂದ ಕಾರ್ಯಕರ್ತರು ಮತ್ತು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಇದಕ್ಕಾಗಿ ಐದು ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ವ್ಯಕ್ತಿಯ ಉತ್ಸವ ಅಲ್ಲ: ದೊಡ್ಡಬಳ್ಳಾಪುರದಲ್ಲಿ ಸಮಾವೇಶದ ಜಾಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮದ ನೇತೃತ್ವ ವಹಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ‘ನಮ್ಮದು ಏಕ ವ್ಯಕ್ತಿ ಕೇಂದ್ರಿತ ಉತ್ಸವವಲ್ಲ. ಜನರ ಸ್ಪಂದನೆಯ ಉತ್ಸವ. ಇದರಲ್ಲಿ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳಾದ ರೈತರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಹಾಲು ಉತ್ಪಾದಕರ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ’ ಎಂದರು.

‘ಬಿ.ಎಸ್‌.ಯಡಿಯೂರಪ್ಪ ಅವರ ಎರಡು ವರ್ಷಗಳ ಅವಧಿ ಮತ್ತು ಬಸವರಾಜ ಬೊಮ್ಮಾಯಿ ಅವರ ಒಂದು ವರ್ಷದ ಆಡಳಿತದಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಮತ್ತು ಕಾರ್ಯಕ್ರಮಗಳನ್ನು ಒಳಗೊಂಡ ರಿಪೋರ್ಟ್‌ ಕಾರ್ಡ್‌ ಅನ್ನು ಜನರ ಮುಂದಿಡಲಾಗುವುದು’ ಎಂದರು.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ