ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನಾಥ ಶವವಾಗಿ ಪತ್ತೆಯಾಗಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಪ್ರಕರಣ ನಡೆದಿದೆ.
ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ (70) ಸಾವಿಗೀಡಾದವರು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಇಂದು ನಡೆದ ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದು, ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದಾರೆ.