Home / ಜಿಲ್ಲೆ / ಬೆಳಗಾವಿ / ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ

ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ

Spread the love

ನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ.

 

ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು ಕಂಡು ಊರಿನ ಜನ ಗುಂಪಾಗಿ ಸೇರಿದರು. ಜನಸಂದಣಿ ಕಂಡು ಮೂವರು ಪರಾರಿಯಾದರು. ಕೈಗೆ ಸಿಕ್ಕ ಮೂವರನ್ನು ಜನ ಪೊಲೀಸರಿಗೆ ಒಪ್ಪಿಸಿದರು.

ಆದರೆ, ತಾವು ಉತ್ತರ ಪ್ರದೇಶದಿಂದ ವ್ಯಾಪಾರ ಮಾಡುತ್ತ ಊರೂರು ಅಲೆಯುವುದಾಗಿ ಆರೋಪಿಗಳು ಹೇಳಿದ್ದಾರೆ. ತನ್ನನ್ನು ಎಳೆದುಕೊಂಡು ಹೋಗಲು ಯತ್ನಿಸಿದರು ಎಂದು ಬಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ರಾತ್ರಿಯವರೆಗೂ ಈ ಬಗ್ಗೆ ಪ್ರಕರಣ ದಾಖಲಿಸಿರಲಿಲ್ಲ.

ಈ ಘಟನಾವಳಿಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಮಾನಸಿಕ ಸದೃಢತೆ ಕಾಪಾಡಿಕೊಂಡು ಅಧ್ಯಯನಕ್ಕೆ ಸಜ್ಜಾಗಿ: ಪ್ರವೀಣ

Spread the love ಅಳ್ನಾವರ: ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ