ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ.
ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ.

ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7