Breaking News

ಬೆಳಗಾವಿಯಲ್ಲಿ ಮಹಾಮಳೆಗೆ ಮಹಿಳೆ ಬಲಿ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ಜೋರಾಗಿಯೇ ಇದೆ. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆ ಸಾಕಷ್ಟು ಹಾನಿ ಮಾಡಿದೆ. 

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹೂಲಿಕಟ್ಟಿ ಗ್ರಾಮದ ಮನೆಯಲ್ಲಿ ಮಲಗಿದ್ದ ಗಂಗವ್ವ ರಾಮಣ್ಣ ಮೂಲಿಮನಿ ಅವರ ಮೇಲೆ ಮನೆಯ ಗೋಡೆ ಕುಸಿದು ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಸ್ಥಳೀಯರ ನೆರವು ಪಡೆದು ಆಸ್ಪತ್ರೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಗ್ರಾಮಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ