Breaking News

ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.

Spread the love

ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ

ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು.

ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ ಸುಧಾಕರ್ ವಿಧಿವಶರಾಗಿದ್ದಾರೆ. ಈ ಕುರಿತು ಖುದ್ದು ಟ್ವೀಟ್ ಮಾಡುವ ಮೂಲಕ ನಿರ್ದೇಶಕ ಸುನಿ ಮಾಹಿತಿ ನೀಡಿದ್ದಾರೆ.2020ಯ ರೌದ್ರಾವತಾರ ಮುಂದುವರೆದಿದೆ. ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ” ಎಂದು ಹಿರಿಯ ನಟ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ನಟ ಸುಧಾಕರ್ ಹಲವು ಸಿನಿಮಾಗಳಲ್ಲಿ ಕಾಮಿಡಿ ಹಾಗೂ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಮಿಂಚಿದ್ದರು. ಅಜಿತ್, ಉಡುಂಬಾ, ಟೋಪಿವಾಲಾ, ಜೂಮ್, ಚಮಕ್, ಪಟಾಕಿ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಇದೀಗ ನಟ ಸುಧಾಕರ್ ಪತ್ನಿ ಹಾಗೂ ಪುತ್ರನನ್ನ ಅಗಲಿದ್ದಾರೆ.


Spread the love

About Laxminews 24x7

Check Also

ರಾಜ್ಯ ಯುವ ಕಾಂಗ್ರೆಸ್​​​​​​​ನ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಅಧಿಕಾರ ಸ್ವೀಕಾರ

Spread the love ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್​​​​​ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ