Breaking News

30 ಐಟಿ, ಬಿಟಿಗೂ ಬಂತು ಕಂಟಕ- ಮುಲಾಜೇ ಇಲ್ಲ. ದೊಡ್ಡವರನ್ನೂ ಬಿಡಲ್ಲ ಎಂದ ಸಿಎಂ

Spread the love

ಬೆಂಗಳೂರು: ಈ ಬಾರಿ ವರುಣದ ರೌದ್ರಾವತಾರಕ್ಕೆ ದೇಶ-ವಿದೇಶಗಳ ಹಲವು ಪ್ರದೇಶಗಳು ನಲುಗಿ ಹೋಗಿವೆ. ಕರ್ನಾಟಕದಲ್ಲಿಯೂ ಈ ಬಾರಿ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಅದರಲ್ಲಿಯೂ ಬೆಂಗಳೂರು ಕೂಡ ಈ ಹಿಂದೆ ಕಾಣದಷ್ಟು ಭೀಕರ ಪರಿಣಾಮವನ್ನು ಈ ಬಾರಿ ಕಂಡಿದೆ.

ಇದಕ್ಕೆ ಮೂಲ ಕಾರಣ ಬೆನ್ನತ್ತಿ ಹೋದಾಗ ಸಿಕ್ಕಿದ್ದು, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಹಲವು ಬಹುಮಹಡಿ ಕಟ್ಟಡ ನಿರ್ಮಾಣವಾದದ್ದು.

ಈ ಹಿಂದೆ ಕೂಡ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಭಾರಿ ಗಲಾಟೆ ನಡೆದಿದ್ದರೂ, ಒತ್ತುವರಿ ತೆರವುಗೊಳಿಸುವಂತೆ ಖುದ್ದು ನ್ಯಾಯಾಲಯವೇ ಸೂಚಿಸಿದ್ದರೂ ಆ ಬಗ್ಗೆ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ಈ ಬಾರಿ ಮಾತ್ರ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇದಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಾಜಕಾಲುವೆ ಒತ್ತುವರಿ ಕಟ್ಟಡಗಳ ತೆರವಿನ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ.

ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವವರಿಗೆ ಕಟ್ಟಡ ತೆರವುಗೊಳಿಸುವಂತೆ ಇದಾಗಲೇ ನೋಟಿಸ್​ ನೀಡಲಾಗಿದೆ. ಇದರಿಂದ ಹೌಹಾರಿಹೋಗಿರುವ ಕಟ್ಟಡಗಳ ಮಾಲೀಕರು ಅತ್ತು-ಕರೆದು ಮಾಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಕಟ್ಟಡ ನೆಲಸಮ ಕಾರ್ಯದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ