Home / ರಾಜಕೀಯ / ಕರ್ನಾಟಕ 2nd PUC ಪೂರಕ ಫಲಿತಾಂಶ ಪ್ರಕಟ: ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಕರ್ನಾಟಕ 2nd PUC ಪೂರಕ ಫಲಿತಾಂಶ ಪ್ರಕಟ: ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Spread the love

ಬೆಂಗಳೂರು, ಸೆಪ್ಟಂಬರ್ 12: ದ್ವಿತೀಯ ಪರೀಕ್ಷೆಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗದೆ. ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು karresults.nic.in ವೆಬ್ ಸೈಟ್‌ ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ.

ಕರ್ನಾಟಕ 2 ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳು ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು.185415. ವಿದ್ಯಾರ್ಥಿಗಳು ನೋಂದಣಿ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳು 175,905 ವಿದ್ಯಾರ್ಥಿಗಳು.

ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 65,233, ಪರೀಕ್ಷೆಯಲ್ಲಿ ಗೈರಾದ ವಿದ್ಯಾರ್ಥಿಗಳ ಸಂಖ್ಯೆ 9,510, ಶೇಕಡವಾರು ಫಲಿತಾಂಶ 37.08ರಷ್ಟು ಬಂದಿದೆ.

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ, ಇಲಾಖೆ ಅಧಿಕೃತ ವೆಬ್‌ಸೈಟ್ (karresults.nic.in) ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ. ಆನ್‌ಲೈನ್‌ ಮೂಲಕ ಹೇಗೆ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ನೋಡಬೇಕು ಎಂಬುದನ್ನು ಇಲ್ಲಿ ಪರಿಶೀಲಿಸಬಹುದು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 2022 ಏಪ್ರಿಲ್‌ನಲ್ಲಿ ಉತ್ತೀರ್ಣರಾಗಲು ವಿಫಲರಾದ ಅಥವಾ ಯಾವುದೇ ವಿಷಯದಲ್ಲಿ ಅಂಕಗಳನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪೂರಕ ಪರೀಕ್ಷೆ ವೇಳೆ ಬರೆಯಬಹುದು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಮತ್ತು ಒಟ್ಟಾರೆಯಾಗಿ ಕನಿಷ್ಠ 35 ಪ್ರತಿಶತ ಗಳಿಸಿರುವುದು ಕಡ್ಡಾಯವಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ