Breaking News

ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ

Spread the love

ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಹೌದು 29 ವರ್ಷದ ಮಂಜುನಾಥ ಗಂಗಾಧರ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೆಸ್ಕಾಂ ಗುತ್ತಿಗೆ ಕಾರ್ಮಿಕ. ಮೂಲತಃ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ನಿವಾಸಿಯಾಗಿದ್ದು. ಸಧ್ಯ ಅಥಣಿ ಹೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.

ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‍ಗೆ ಬೈಕ್ ಸಹಾಯದಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಥಣಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿರುವ ಮಂಜುನಾಥ ಮುತ್ತಗಿ ಪತ್ನಿ ಲಕ್ಷ್ಮೀ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನನ್ನ ಪತಿಯ ಸಾವಿಗೆ ಅಥಣಿ ಹೆಸ್ಕಾಂ ಅಧಿಕಾರಿ ನಜೀರ್ ಮೆಹಬೂಬ್‍ಸಾಬ್ ಡಾಲಾಯತ್, ಲೈನ್‍ಮ್ಯಾನ್ ಬಸವರಾಜ್ ಸದಾಶಿವ ಕುಂಬಾರ ಕಾರಣ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ