ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ.
ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ ಅರವಿಂದ್ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರಕಟವಾಗಿದೆ.
ಉನ್ನತಶಿಕ್ಷಣ ಸಚಿವಡಾ. ಸಿ.ಎನ್ಅಶ್ವಥ್ನಾರಾಯಣಮುಖ್ಯಅತಿಥಿಗಳಾಗಿಉಪಸ್ಥಿತರಿರಲಿದ್ದಾರೆಎಂದುರಾಣಿ ಚೆನ್ನಮ್ಮವಿವಿಕುಲಪತಿಪ್ರೊ. ರಾಮಚಂದ್ರೆಗೌಡಮಾಹಿತಿನೀಡಿದ್ದಾರೆ.