Breaking News

ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೆ ವಾರ್ಡ್​ ಮೀಸಲಾತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್​

Spread the love

ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳಿಗೆ ನಿಗದಿ ಪಡಿಸಿರುವ ಮೀಸಲಾತಿ ಮರು ಪರಿಶೀಲನೆ ನಡೆಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್​ ಸರ್ಕಾರಕ್ಕೆ ಕೇಳಿದೆ. ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳಲ್ಲಿ ಮಹಿಳೆಯರಿಗೆ ಮಾತ್ರ ಮೀಸಲಿರಿಸಲಾಗಿದೆ. ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೇ ಮೀಸಲಿರಿಸಲಾಗಿದೆ. ಆ ಮೂಲಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮೀಸಲು ನಿಗದಿಯಲ್ಲಿ ಏನಾದರೂ ಲೋಪ ಕಂಡರೆ ಹೊಸದಾಗಿ ಮೀಸಲು ನಿಗದಿಪಡಿಸುವಂತೆ ಅದೇಶ ನೀಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಅಲ್ಲದೇ, ಹೊಸದಾಗಿ ವಾರ್ಡ್‌ವಾರು ಮೀಸಲು ನಿಗದಿ ಮಾಡುವ ಬಗ್ಗೆ ಸರ್ಕಾರದ ನಿಲುವು ಏನು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಈ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ಸೆ.22ಕ್ಕೆ ಮತದಾರರ ಪಟ್ಟಿ ಅಂತಿಮಗೊಳಿಸಲಾಗುವುದು. ಆನಂತರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ