ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ.
ನೂರಾರು ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿವೆ ಎನ್ನಲಾಗಿದ್ದು, ಇವುಗಳಲ್ಲಿ ಬಹಳಷ್ಟು ಕಟ್ಟಡಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ.
ಹೀಗಾಗಿ ಜನಸಾಮಾನ್ಯರಿಗೆ ಮಾತ್ರ ಈ ತೆರವು ಕಾರ್ಯಾಚರಣೆ ಅನ್ವಯ ಎಂಬ ಆರೋಪ ಕೇಳಿ ಬರುತ್ತಿದ್ದರ ಮಧ್ಯೆ ಸಚಿವ ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಮಳೆ ಬಂದ ಸಂದರ್ಭದಲ್ಲಿ ಮಾತ್ರ ಡೆಮಾಲಿಶನ್ ನಾಟಕ ಮಾಡಿ ಬಳಿಕ ಸ್ಥಗಿತಗೊಳಿಸುತ್ತಿತ್ತು. ಆದರೆ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡದೆ ಒತ್ತುವರಿ ಮಾಡಿರುವ ಎಲ್ಲ ಕಟ್ಟಡಗಳನ್ನು ತೆರವುಗೊಳಿಸುತ್ತದೆ ಎಂದು ಖಡಕ್ ಮಾತುಗಳನ್ನಾಡಿದ್ದಾರೆ.
Laxmi News 24×7