Breaking News

ಬಲವಂತದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಇಂದು ಜೆಡಿಎಸ್ ಪ್ರತಿಭಟನೆ

Spread the love

ಹಿಂದಿ ದಿವಸ್ (Hindi Divas) ವಿರೋಧಿಸಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (JDS State President CM Ibrahim) ಅವರ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಯಲಿದೆ.

ಬಲವಂತದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಇಂದು ಜೆಡಿಎಸ್ ಪ್ರತಿಭಟನೆ (JDS Protest) ಮಾಡಲಿದ್ದು, ರಾಜ್ಯ ಜೆಡಿಎಸ್ ಕಚೇರಿಯ ಆವರಣದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಪ್ರತಿಭಟನೆ ಮಾಡಲಿದೆ.

ಜೆಪಿ ಭವನದ ಮುಂಭಾಗದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ (State And Central Government) ವಿರುದ್ಧ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಿ ದಿನ ಆಚರಣೆ ಮಾಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ (CM Basavaraj Bommai) ಮಾಜಿ ಸಿಎಂ ಹೆಚ್​​​.ಡಿ.ಕುಮಾರಸ್ವಾಮಿ (Former CM HD Kumaraswamy) ಪತ್ರ ಬರೆದು ಆಗ್ರಹಿಸಿದ್ದರು.

ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಗೆ ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದಿ ದಿವಸ್ ಆಚರಿಸುವ ಮೂಲಕ ಕನ್ನಡಿಗರ ಮೇಲೆ ಅನ್ಯ ಭಾಷೆಗಳ ಹೇರಿಕೆ ಮಾಡ್ತಿದಾರೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ