Breaking News
Home / ಜಿಲ್ಲೆ / ಬೆಳಗಾವಿ / ಇಂಚಿಂಚಿಗೂ ಸಮಸ್ಯೆ ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ ಇಂಚಲ ಗ್ರಾಮ

ಇಂಚಿಂಚಿಗೂ ಸಮಸ್ಯೆ ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ ಇಂಚಲ ಗ್ರಾಮ

Spread the love

ಬೈಲಹೊಂಗಲ: ಶೈಕ್ಷಣಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನದೆಯಾದ ಕೊಡುಗೆ ನೀಡುವಲ್ಲಿ ಜಿಲ್ಲೆಯಲ್ಲಿ ಹೆಸರು ಮಾಡಿದ ಊರು ಇಂಚಲ. ಆದರೆ, ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ.

ಈ ಗ್ರಾಮದಲ್ಲಿ 10 ಸಾವಿರ ಜನಸಂಖ್ಯೆ ಇದೆ.

300ಕ್ಕೂ ಅಧಿಕ ಶಿಕ್ಷಕರು ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸೇವೆಯಲ್ಲಿದ್ದಾರೆ. ತಾಲ್ಲೂಕಿನಲ್ಲಿ ಅತಿ ಹೆಚ್ಚು ಶಿಕ್ಷಕರನ್ನು ಹೊಂದಿದ ಗ್ರಾಮ ಎಂಬ ಖ್ಯಾತಿ ದಶಕಗಳಿಂದಲೂ ಈ ಊರಿಗೆ ಇದೆ. ಶಿಕ್ಷಣ ಮಾತ್ರವಲ್ಲದೇ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಗ್ರಾಮಸ್ಥರು ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಪಡೆದ ಜನ ಸುಧಾರಣೆಯಾಗಿದ್ದಾರೆ. ಆದರೆ, ಗ್ರಾಮದ ಅವಸ್ಥೆ ಬದಲಾಗಿಲ್ಲ.

ಮೂಲಸೌಕರ್ಯ ಮರೀಚಿಕೆ: ಗ್ರಾಮ ಪಂಚಾಯಿತಿ ವತಿಯಿಂದ ಜನರ ಸಮಸ್ಯೆಗಳ ನಿವಾರಣೆ ಕನಸಿನ ಮಾತಾಗಿದೆ. ಮೂಲ ಸೌಕರ್ಯ ಮರೀಚಿಕೆಯಾಗಿದೆ.

ಮಳೆ ಬಂದರೆ ಗ್ರಾಮದ ಬೀದಿಗಳಲ್ಲಿ ಸರಿಯಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಎಲ್ಲೆಂದರಲ್ಲಿ ಕಸಕಡ್ಡಿ, ಗಲೀಜು ಹರಡಿ ರಸ್ತೆ ಮೇಲೆ ತುಂಬಿ ತುಳುಕುತ್ತಿರುತ್ತದೆ. ಕೆಲ ಮುಖ್ಯ ಬೀದಿಗಳ ರಸ್ತೆಗಳಂತೂ ಅಭಿವೃದ್ಧಿ ಕಾಣದೆ ವರ್ಷಗಳೇ ಕಳೆದಿವೆ. ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಸಾಕಷ್ಟು ಸಲ ಗ್ರಾಮಸ್ಥರು ಗೋಗರೆದರೂ ಕೆಲಸವಾಗಿಲ್ಲ. ಬೀದಿ ದೀಪಗಳ ಅವ್ಯವಸ್ಥೆಯಿಂದಾಗಿ ನಿವಾಸಿಗಳಿಗೆ ತೊಂದರೆ ಆಗಿದೆ.

ಕತ್ತಲೆಯಲ್ಲಿ ಕ್ರಿಮಿಕೀಟಗಳ ಹಾವಳಿ ಹೆಚ್ಚಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ, ಹದಗೆಟ್ಟ ಬೀದಿಗಳ ರಸ್ತೆ ದುರಸ್ತಿ ಕಾರ್ಯ ಹಾಗೆ ಉಳಿದಿದೆ ಎನ್ನುತ್ತಾರೆ ಗ್ರಾಮದ ನಿವಾಸಿಗಳು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ