Breaking News

ಜಿಲ್ಲಾಮಟ್ಟದ ಕ್ರೀಡಾಕೂಟಗಳ ಗುಂಪು ಕ್ರೀಡೆ ಹಾಗೂ ಆಟೋಟಗಳನ್ನು ಸೆ.30ರೊಳಗಾಗಿ ಮುಗಿಸಬೇಕು : ಬಸವರಾಜ ನಾಲತವಾಡ

Spread the love

ಬೆಳಗಾವಿ: ಈ ಬಾರಿಯ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಗುಂಪು ಕ್ರೀಡೆ ಹಾಗೂ ಆಟೋಟಗಳನ್ನು ಸೆ.30ರೊಳಗಾಗಿ ಮುಗಿಸಬೇಕು ಎಂದು ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದರು.

ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವ ಯಾವ ತಾಲ್ಲೂಕಿನಲ್ಲಿ ಗುಂಪು ಆಟಗಳನ್ನು ಆಯೋಜಿಸಬೇಕು ಎಂದು ಈಗಲೇ ನಿರ್ಧರಿಸಬೇಕು.

ಎಲ್ಲ ಕ್ರೀಡೆಗಳನ್ನೂ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಿ.ಎಸ್.ಡಿಗ್ರಜ್, ಇತರ ಅಧಿಕಾರಿಗಳು, ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಇದ್ದರು.

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಡಿ.ಕಾಲವಾಡ. ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎಸ್.ಎಂ. ಕರಿಕಟ್ಟಿ, ರಾಜ್ಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎನ್‌.ಹಲಕಿ, ರಾಜ್ಯ ಪದಾಧಿಕಾರಿ ಮಲ್ಲಾಪೂರ ಇದ್ದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ