Breaking News
Home / ಜಿಲ್ಲೆ / ಬೆಳಗಾವಿ / ‘ಸಂಕಷ್ಟದಲ್ಲೂ ಸಮಚಿತ್ತದ ಆಲೋಚನೆ ಮಾಡಿ’

‘ಸಂಕಷ್ಟದಲ್ಲೂ ಸಮಚಿತ್ತದ ಆಲೋಚನೆ ಮಾಡಿ’

Spread the love

ಬೆಳಗಾವಿ: ನಮ್ಮಲ್ಲಿನ ಸಮಚಿತ್ತದ ಯೋಚನೆಗಳು ಆತ್ಮಹತ್ಯೆಯ ವಿಚಾರಗಳನ್ನು ದೂರಗೊಳಿಸುತ್ತವೆ ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಅಭಿಪ್ರಾಯ ಪಟ್ಟರು.

ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಾನಸಿಕ ರೋಗ ಚಿಕಿತ್ಸಾ ವಿಭಾಗ ಹಾಗೂ ನರ್ಸಿಂಗ್ ಸೈನ್ಸ್‌ ವಿಭಾಗದ ಸಹಯೋಗದಲ್ಲಿ ‘ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

 

ಕ್ಷಣ ಮಾತ್ರದ ಕೆಟ್ಟ ಯೋಚನೆಗೆ ಒಳಗಾಗಿ ಇಂದು ನಮ್ಮ ಯುವ ಜನಾಂಗ ಆತ್ಮಹತ್ಯೆಗೆ ತುತ್ತಾಗುತ್ತಿದೆ. ಭಾರತದಲ್ಲಿ ಪ್ರತಿ ದಿನ ಸುಮಾರು 450 ಜನ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. ಇದು ನಿಜಕ್ಕೂ ಖೇದಕರ ಸಂಗತಿ. ಇದರ ಜಾಗೃತಿಗಾಗಿಯೇ ಪ್ರತಿ ವರ್ಷ ಸೆಪ್ಟೆಂಬರ್‌ 10 ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ ಎಂದರು.

ಮಾನಸಿಕ ರೋಗ ತಜ್ಞ ಡಾ.ಸುಮಿತಕುಮಾರ ದುರ್ಗೋಜಿ ಮಾತನಾಡಿ, ಆತ್ಮಹತ್ಯೆ ಆಲೋಚನೆ ಒಂದು ಮಾನಸಿಕ ರೋಗ ಲಕ್ಷಣ. ಇಂತಹ ಆಲೋಚನೆಗಳು ಬರುವ ಮುಂಚೆ ಕೆಲವೊಂದು ಲಕ್ಷಣಗಳನ್ನು ತೋರಿಸುತ್ತದೆ. ತಮ್ಮ ಸಂಬಂಧಿಕರಿಗೆ, ಆತ್ಮೀಯರಿಗೆ ಭೇಟಿಯಾಗುವುದು, ಜಿಗುಪ್ಸೆ ಹೊಂದಿದ ಜೀವನ ಪದ್ಧತಿ… ಹೀಗೆ ಅನೇಕ ರೀತಿಯ ಲಕ್ಷಣಗಳನ್ನು ತೋರುತ್ತಾರೆ. ಆದರೆ, ಇಂತಹ ಲಕ್ಷಣವುಳ್ಳ ವ್ಯಕ್ತಿಗಳನ್ನು ತಕ್ಷಣ ಮಾನಸಿಕ ರೋಗ ಚಿಕಿತ್ಸೆಗೆ ಕರೆದೊಯ್ದರೆ ತಕ್ಕ ಉಪಚಾರ ಮಾಡಬೇಕು ಎಂದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ