Breaking News

ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆ

Spread the love

ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಹೌದು ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಸಂವಿಧಾನದಲ್ಲಿರುವ ಎಲ್ಲಾ ಭಾಷೆಗಳಿಗೆ ಸಮಾನ ಸ್ಥನಮಾನಗಳನ್ನು ನೀಡಬೇಕು.

ಶಿಕ್ಷಣ ಹಾಗೂಐ ಉದ್ಯೋಗಗಳಲ್ಲಿ ಎಲ್ಲಾ ಭಾಷೆಗಳಿಗೆ ಸಮಾನ ಸ್ಥಾನ ನೀಡಬೇಕು. ಹಿಂದಿ ಭಾಷಾ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ನಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ