ಬೆಳಗಾವಿಯ ರಾಣಿ ಚನ್ನಮ್ಮ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಭಾಗಿಯಾಗಿದ್ದಾರೆ. ಕನ್ನಡದ ಖ್ಯಾತ ನಟ ರಮೇಶ ಅರವಿಂದ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಹೌದು ಇಂದು ಬೆಳಗಾವಿಯ ರಾಣಿ ಚೆನ್ನಮ್ಮಾ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಸುವರ್ಣಸೌಧ ಸಭಾಭವನದಲ್ಲಿ ನಡೆಯುತ್ತಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕನ್ನಡದ ಹೆಸರಾಂತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.
ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಡಾಕ್ಟರ್ ಆಫ್ ಲೆಟರ್ಸ್ ಪ್ರಧಾನ ಮಾಡಲಾಗುತ್ತಿದೆ. ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿರವರಿಗೂ ಕೂಡ ಈ ಸಂದರ್ಭದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.
ಈ ಮೂವರೂ ಗಣ್ಯರಿಗೆ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಈ ವೇಳೆ 11 ಸುವರ್ಣ ಪದಕಗಳನ್ನ ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ಪ್ರಧಾನ ಮಾಡಲಾಗುತ್ತಿದೆ. ವಿವಿಧ ವಿಭಾಗಗಳಲ್ಲಿ 48 ವಿದ್ಯಾರ್ಥಿಗಳಿಗೆ ಪಿಎಚ್‍ಡಿ, ಸ್ನಾತಕೋತ್ತರ-ಪದವಿಯ 163 ವಿದ್ಯಾರ್ಥಿಗಳಿಗೆ ಪದಕ ವಿತರಣೆ ಕಾರ್ಯಕ್ರಮ ನಡೆಯಲಿದೆ.