ಬೆಳಗಾವಿ: ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಕೆಲ ದಿನಗಳಿಂಸ ಏರುಪೇರು ಆಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸುಮಾರು 15-20 ದಿನಗಳಿಂದ ಆನಂದ ಮಾಮನಿ ಅವರ ಆರೋಗ್ಯ ಸರಿ ಇಲ್ಲ.
ಹೀಗಾಗಿ ಇತ್ತೀಚೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಾಮನಿ ಕಂಡು ಬಂದಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೂಡಲೇ ಅಲ್ಲಿಂದ ವಾಪಸ್ ಮನೆಗೆ ತೆರಳಿದ್ದರು.
ಈಗ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆನಂದ ಮಾಮನಿ ಅವರು ಚೆನ್ನೈನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.