Breaking News

ಆನ್‍ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್- ಐವರ ಬಂಧನ

Spread the love

ಹಾಸನ: ಆನ್‍ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಬಂಧಿತರಿಂದ 5 ಮೊಬೈಲ್, ನೋಟ್ ಬುಕ್ ವಶಕ್ಕೆ ಪಡೆಯಲಾಗಿದೆ. ಸತ್ಯಮಂಗಲ ಬಡಾವಣೆಯ ಕಾಂಪ್ಲೆಕ್ಸ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸ್ ತಂಡಕ್ಕೆ ಎಸ್‍ಪಿ ಶ್ರೀನಿವಾಸ್‍ಗೌಡ ಅಭಿನಂದನೆ ಸಲ್ಲಿಸಿದ್ದಾರೆ. ನಿಮಗೆ ಯಾರಾದರೂ ಬೆಟ್ಟಿಂಗ್ ನಡೆಸುತ್ತಿರುವವರ ಬಗ್ಗೆ ತಿಳಿದಿದ್ದರೆ ನಮಗೆ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿಡಲಾಗುವುದು ಎಂದು ಸಾರ್ವಜನಿಕರಲ್ಲಿ ಎಸ್‍ಪಿ ಮನವಿ ಮಾಡಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ