ರಾಯಚೂರು: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ ಮಾಡಲಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ
Laxmi News 24×7