Breaking News

ಮದ್ಯದ ಅಮಲಿನಲ್ಲಿ ಹಾವು ಹಿಡಿದ ವ್ಯಕ್ತಿ..

Spread the love

ಬೆಳಗಾವಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಎಂಟು ಅಡಿ ಉದ್ದದ ಹಾವನ್ನು ಹಿಡಿದಿರುವ ಘಟನೆ ಜಿಲ್ಲೆಯ ಫಾಲಬಾವಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹಾವು ನಾಲ್ಕು ಬಾರಿ ಕಚ್ಚಿದರೂ ಅವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಪಾಲಭಾವಿ ಸೊನ್ನದ್ ತೋಟದ ಅಂಗನವಾಡಿಯಲ್ಲಿ ಕಾಣಿಸಿಕೊಂಡ ಹಾವನ್ನು ಮದ್ಯದ ಅಮಲಿನಲ್ಲಿದ್ದ ರಮೇಶ್ ಬಾಗಡೆ ಎಂಬುವರು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಯಾವುದೇ ಮುಂಜಾಗ್ರತ ಕ್ರಮ ಅನುಸರಿಸದೇ ಇರುವುದರಿಂದ ರಮೇಶ್ ಅವರಗೆ ಮುಖ, ಕೆನ್ನೆ. ತುಟಿ ಹಾಗೂ ಕಾಲಿಗೆ ನಾಲ್ಕು ಬಾರಿ ಹಾವು ಕಚ್ಚಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.ಈ ಬಗ್ಗೆ ಮಾತನಾಡಿದ ರಮೇಶ್​​ “ಕಳೆದ 20 ವರ್ಷಗಳಿಂದ ಹಾವುಗಳನ್ನು ಹಿಡಿಯುತ್ತಿದ್ದೇನೆ. ಹಾವು ಕಚ್ಚಿದಾಗ ಬೆಳ್ಳುಳಿ ಹಾಗೂ ಒಂದು ಲೀಟರ್ ನೀರನ್ನು ಸೇವಿಸುತ್ತೇನೆ. ಇದರಿಂದ ನನಗೆ ಹಾವು ಕಚ್ಚಿದರೂ ಏನು ಆಗುವುದಿಲ್ಲ” ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ