Breaking News

B.I.M.S. ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಣೆ

Spread the love

ಇಂದು ಸೆಪ್ಟೆಂಬರ್ 15 ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಹಿನ್ನೆಲೆ ಬೆಳಗಾವಿಯಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರಿಯಾತ್ಮಕ ಕೆಲಸಗಳ ಮೂಲಕ ಭರವಸೆಯನ್ನು ಮೂಡಿಸೋಣ ಎಂಬ ಘೋಷ್ಯವಾಕ್ಯದಡಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಬಿಮ್ಸ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪಿ.ಮುರಳಿಮೋಹನ ರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಯಾರದೋ ವ್ಯಕ್ತಿಯಿಂದ ಹಲ್ಲೆಗೆ ಒಳಗಾಗಿರುವ ವ್ಯಕ್ತಿಗಳಿಗೆ ಸರ್ಕಾರದಿಂದ ಪರಿಹಾರದ ಹಣ ನೀಡಲಾಗುತ್ತದೆ. ಹೀಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಬಳಿ ಬರುವ ಇಂತವರಿಗೆ ಎಷ್ಟು ಪರಿಹಾರ ನೀಡಬೇಕು ಎಂಬುದನ್ನು ನಿರ್ಧರಿಸುತ್ತದೆ. ಹೀಗಾಗಿ ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ