Breaking News

ಎಷ್ಟೇ ದೊಡ್ಡ ಹುಲಿ ಇದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ; BSY ಮೊದಲು ರಾಜೀನಾಮೆ ನೀಡಲಿ; ಶಾಸಕ ಯತ್ನಾಳ್ ಆಗ್ರಹ

Spread the love

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊದಲು ಎಲ್ಲಾ ಹುದ್ದೆಗೂ ರಾಜೀನಾಮೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.

ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಈ ವಿಚಾರವಾಗಿ ಮೊದಲು ಯಡಿಯೂರಪ್ಪ ರಾಜೀನಾಮೆ ಕೊಡಲಿ. ಎಷ್ಟೇ ದೊಡ್ಡ ಹುಲಿ ಇದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಹೇಳಿದರು.

ಈ ಹಿಂದೆ ಎಲ್.ಕೆ. ಅಡ್ವಾಣಿ ಮೇಲೆ ಆರೋಪ ಕೇಳಿಬಂದಿತ್ತು. ಆ ಸಂದರ್ಭದಲ್ಲಿ ಎಲ್ಲಾ ಸ್ಥಾನಕ್ಕೆ ಅಡ್ವಾಣಿ ರಾಜೀನಾಮೆ ನೀಡಿದ್ದರು. ರಾಜಾ ಹುಲಿ ಇರಲಿ ಯಾರೇ ಇರಲಿ ರಾಜೀನಾಮೆ ಕೊಡಲಿ. ಅಡ್ವಾಣಿ, ವಾಜಪೇಯಿ ಅವರಿಗಿಂತ ಇವರು ದೊಡ್ಡವರಾ ? ಮೊದಲು ರಾಜೀನಾಮೆ ಕೊಟ್ಟು ಎಲ್.ಕೆ. ಅಡ್ವಾಣಿ ಆದರ್ಶ ಪಾಲಿಸಲಿ ಎಂದರು.


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ