Breaking News

CUET-UG 2022 ಪರೀಕ್ಷಾ ಫಲಿತಾಂಶ ಪ್ರಕಟ

Spread the love

ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಪದವಿ ಪೂರ್ವ) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ವಿಶ್ವವಿದ್ಯಾನಿಲಯಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ಎನ್‌ಟಿಎಯು ಜುಲೈ 15 ರಿಂದ ಆಗಸ್ಟ್ 30 ರ ನಡುವೆ ಆರು ಹಂತಗಳಲ್ಲಿ (ಸಿಯುಇಟಿ-ಯುಜಿ) 2022 ಪರೀಕ್ಷೆ ನಡೆಸಿತ್ತು. ಪ್ರವೇಶ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡಬಹುದು.

ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಅನ್ನು ದೇಶದ 259 ನಗರಗಳಲ್ಲಿ ಮತ್ತು 489 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಯನ್ನು ದೇಶದ 43 ಕೇಂದ್ರೀಯ ವಿಶ್ವವಿದ್ಯಾಲಯಗಳು, 13 ರಾಜ್ಯ ವಿಶ್ವವಿದ್ಯಾಲಯಗಳು, 12 ಡೀಮ್ಡ್ ವಿಶ್ವವಿದ್ಯಾಲಯಗಳು ಮತ್ತು 18 ಖಾಸಗಿ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಮಾಡಲಾಗಿದೆ.ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ 6 ನೇ ಹಂತದ ನಾಲ್ಕನೇ ಮತ್ತು ಕೊನೆಯ ದಿನ ಮಸ್ಕತ್, ರಿಯಾದ್, ದುಬೈ ಮತ್ತು ಶಾರ್ಜಾ ಸೇರಿದಂತೆ ಭಾರತದ 239 ನಗರಗಳಲ್ಲಿ 444 ಪರೀಕ್ಷಾ ಕೇಂದ್ರಗಳಲ್ಲಿ 1,40,559 ಅಭ್ಯರ್ಥಿಗಳಿಗೆ ಯಶಸ್ವಿಯಾಗಿ ನಡೆಸಲಾಯಿತು.

ಸರಿಸುಮಾರು 14,90,000 ಅಭ್ಯರ್ಥಿಗಳಿಗೆ CUET UG ಅನ್ನು ನಿಗದಿಪಡಿಸಲಾಗಿತ್ತು. ಎನ್‌ಟಿಎ ಪ್ರಕಾರ, ಮೊದಲ ಸ್ಲಾಟ್‌ನಲ್ಲಿ 8,10,000 ಮತ್ತು ಎರಡನೇ ಸ್ಲಾಟ್‌ನಲ್ಲಿ 6,80,000 ಭಾಗವಹಿಸಿದ್ದರು.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ