Breaking News
Home / ಜಿಲ್ಲೆ / ಬೆಂಗಳೂರು / ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ

ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ

Spread the love

ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ(ಹೈ.ಕ) ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ವ್ಯವಸ್ಥೆಯನ್ನಾದರೂ ತರಬೇಕು’ ಎಂದು ಸರಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯ ನರಸಿಂಹ ನಾಯಕ್(ರಾಜುಗೌಡ) ಆಗ್ರಹಿಸಿದ ಪ್ರಸಂಗ ನಡೆಯಿತು.

 

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಕರ ಕೊರತೆ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದ ಇತರೆ ಕಡೆಗಳಲ್ಲಿ 16 ಮಕ್ಕಳಿಗೆ ಒಬ್ಬರು ಶಿಕ್ಷಕರಿದ್ದರೆ, ಹೈಕ ಭಾಗದ ಏಳು ಜಿಲ್ಲೆಗಳಲ್ಲಿ 25 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದಾರೆಂದು ಶಿಕ್ಷಣ ಸಚಿವರೇ ಹೇಳಿದ್ದಾರೆ. ಹೀಗಾದರೆ ಆ ಭಾಗದ ಮಕ್ಕಳು ಶೈಕ್ಷಣಿಕವಾಗಿ ಮುಂದುವರೆಯಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು.

‘ಸರಕಾರದ ಅಂಕಿ-ಅಂಶಗಳ ಪ್ರಕಾರ ಶೇ.40ಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ನನ್ನ ಕ್ಷೇತ್ರದಲ್ಲೇ ಹಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದರೂ ಇನ್ನೂ ಕೊರತೆ ಇದೆ. ಹೀಗಾಗಿ ಕೂಡಲೇ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ನನಗಿರುವ ಮಾಹಿತಿ ಪ್ರಕಾರ 80 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದರೆ ಹೇಗೆ? ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ