ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗ್ರಾಮಪಂಚಾಯಿತಿಗಳಿಗೆ ಸರ್ಕಾರದ 30 ಕ್ಕೂ ಹೆಚ್ಚು ಇಲಾಖೆಗಳ ಕಾರ್ಯಕ್ರಮ, ಯೋಜನೆಗಳನ್ನು ಜಾರಿ ಮಾಡುವ ಜವಾಬ್ದಾರಿಗಳನ್ನು ನೀಡಲಾಗಿದೆ. ಹೀಗಾಗಿ ಕೆಲಸದ ಒತ್ತಡ ಕಡಿಮೆ ಮಾಡಲು 3-4 ತಿಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ಇಲ್ಲವೇ ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 326 ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕಾರ್ಯದರ್ಶಿ ಗ್ರೇಡ್ 1,487 ಹುದ್ದೆಗಳ ನೇರ ನೇಮಕಾತಿ, ಕಾರ್ಯದರ್ಶಿ ಗ್ರೇಡ್ 2 ರ 556 ಹುದ್ದೆಗಳಲ್ಲಿ 343 ಹುದ್ದೆಗಳನ್ನು ನೇರ ನೇಮಕಾತಿ ಮಾಡಲಾಗುವುದು. ಖಾಲಿ ಇರುವ 675 ಎಸ್ ಡಿಎ ಹುದ್ದೆಗಳ ಪೈಕಿ 124 ಅನ್ನು ನೇರ ನೇಮಕಾತಿ ಹಾಗೂ ಉಳಿದವುಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Laxmi News 24×7