Breaking News

ಅಕ್ರಮ- ಸಕ್ರಮ ಅವಧಿ ಒಂದು ವರ್ಷ ವಿಸ್ತರಣೆ ಮಾಡಿದ ಸರ್ಕಾರ

Spread the love

ಬೆಂಗಳೂರು: ಸರಕಾರಿ ಭೂಮಿ ಸಾಗುವಳಿಯ ಅಕ್ರಮ- ಸಕ್ರಮ ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೆ ಒಂದು ವರ್ಷಗಳ‌ ಕಾಲ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ.

ಇದಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆ ತಿದ್ದುಪಡಿ ವಿಧೇಯಕವನ್ನು ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

 

94 ಎ ತಿದ್ದುಪಡಿ ಮೂಲಕ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿ ಸರಕಾರಿ ಭೂಮಿಯಲ್ಲಿ ನಡೆಸುತ್ತಿದ್ದ ಅಕ್ರಮ ಸಾಗುವಾಳಿಯನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಅವಕಾಶವಿತ್ತು. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರಕಾರ ನಿರ್ಧರಿಸಿದೆ.

ಅಕ್ರಮ‌ ಸಕ್ರಮಕ್ಕೆ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಐವರು ಸದಸ್ಯರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ. ಶಾಸಕರು ಇದರ ಭಾಗವಾಗಿರಲಿದ್ದು, ತಹಶೀಲ್ದಾರ್ ಕಾರ್ಯದರ್ಶಿಯಾಗಿರುತ್ತಾರೆ. ತಾಲೂಕಿಗೆ ಒಂದಕ್ಕಿಂತ ಹೆಚ್ಚು ಸಮಿತಿ ರಚನೆ ಮಾಡುವುದು ಅಗತ್ಯ ಎಂದು ಕಂಡು ಬಂದರೆ ಹೆಚ್ಚುವರಿ ನೇಮಕ ಮಾಡಬಹುದು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ