Breaking News

ವಾಹನ ಸವಾರರೇ ಎಚ್ಚರ.! ಮತ್ತೆ ಶುರುವಾಗಲಿದೆ ʼಟೋಯಿಂಗ್ʼ

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರು ಸ್ವಲ್ಪ ಎಚ್ಚರದಿಂದ ಇರಬೇಕಾದ ಅಗತ್ಯವಿದೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭವಾಗುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುಳಿವು ನೀಡಿದ್ದಾರೆ.

 

ಬೆಂಗಳೂರಿನಲ್ಲಿ ವೆಹಿಕಲ್ ಟೋಯಿಂಗ್ ಅಗತ್ಯವಿದೆ. ಯಾವ ರೀತಿಯಲ್ಲಿ ಟೋಯಿಂಗ್ ಮಾಡಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೈಕೋರ್ಟ್ ಕೂಡ ಕಾಲಾವಕಾಶ ನೀಡಿತ್ತು ಎಂದು ತಿಳಿಸಿದ್ದಾರೆ.

ಟೋಯಿಂಗ್ ಪರಿಶೀಲನೆಗೆ ಹೈಕೋರ್ಟ್ 6 ವಾರಗಳ ಕಾಲ ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿಗೆ ಪೊಲೀಸ್ ಇಲಾಖೆ ಮುಂದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ